Wednesday, December 26, 2012

Anuradha : Gummana kareyadire kannada lyrics

Dasara padagalu in Kannada films week : Song 4

Film : Anuradha 
Singers : P B Srinivas,S Janaki 
Rachane : Purandhara Dasaru 

ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ 
ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ 

ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು
ಮಮ್ಮು ಉಣ್ಣುತೇನೆ ಅಮ್ಮ ಅಳುವುದಿಲ್ಲ
ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ 

ಹೆಣ್ಣುಗಳಿರುವಲ್ಲಿಗೆ ಹೋಗಿ 
ಅವರ ಕಣ್ಣು ಮುಚ್ಚುವುದಿಲ್ಲವೆ
ಹೆಣ್ಣುಗಳಿರುವಲ್ಲಿಗೆ ಹೋಗಿ 
ಅವರ ಕಣ್ಣು ಮುಚ್ಚುವುದಿಲ್ಲವೆ
ಚಿಣ್ಣರ ಬಡಿಯೆನು ಅಣ್ಣನ ಬೈಯೆನು
ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ
ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ 

ಬಾವಿಗೆ ಹೋಗೆ ಕಾಣೆ ಅಮ್ಮ ನಾನು
ಹಾವಿನೊಳಡೆ ಕಾಣೆ
ಬಾವಿಗೆ ಹೋಗೆ ಕಾಣೆ ಅಮ್ಮ ನಾನು
ಹಾವಿನೊಳಡೆ ಕಾಣೆ
ಆವಿನ ಮೊಲೆಯೂಡೆ ಕರುಗಳ ಬಿಡೆ ನೋಡೆ
ದೇವರಂತೆ ಒಂದು ಠಾವಿಗೆ ಕೂರುವೆ
ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ 


ಮಗನ ಮಾತನು  ಕೇಳುತ ಗೋಪಿದೇವಿ
ಮುಗುಳು ನಗುವು ನಗುತಾ
ಜಗದೊಡೆಯ ಶ್ರಿ ಪುರಂದರವಿಠಲನ
ಜಗದೊಡೆಯ ಶ್ರಿ ಪುರಂದರವಿಠಲನ
ಬಿಗಿದಪ್ಪಿಕೊಂಡಳು ಮೋಹದಿದಾಗ
ಗುಮ್ಮನ ಕರೆಯದಿರೆ ಅಮ್ಮ ನೀನು
ಗುಮ್ಮನ ಕರೆಯದಿರೆ


*************************************

*************************************
Youtube link here 



1 comment: